ದಾವಣಗೆರೆ ವಿವಿ: ಬೋಧಕೇತರ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Spread the love


Jobs

oi-Shankrappa Parangi

|

ದಾವಣಗೆರೆ, ಸೆಪ್ಟಂಬರ್ 23: ದಾವಣಗೆರೆ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯಲ್ಲಿನ 10 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಫ್‌ಲೈನ್ ಅರ್ಜಿ ಸಲ್ಲಿಕೆ, ವಿಧಾನ, ವಿದ್ಯಾರ್ಹತೆ ಬಗ್ಗೆ ತಿಳಿಯಿರಿ.

ವಿಶ್ವವಿದ್ಯಾಲಯ ಸೆಪ್ಟಂಬರ್ 19ರಂದು ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 18ರೊಳಗಾಗಿ ಸಹಾಯಕ ಕುಲಸಚಿವ, ಕಚೇರಿ ಅಧೀಕ್ಷಕ, ಸಹಾಯಕ ದರ್ಜೆ ಸಹಾಯಕ ಸೇರಿ ಹತ್ತು ಬೋಧಕೇತರ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಕೋರಿದೆ. ಮಾನ್ಯತೆ ಪಡೆದ ಮಂಡಳಿ ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಈ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿ ಒಳಗಿನವರು ಆಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

ಯಾದಗಿರಿಯಲ್ಲಿ ಉದ್ಯೋಗಾಕಾಂಕ್ಷಿಗಳ ಜಿಲ್ಲಾ ಸಮಾವೇಶಯಾದಗಿರಿಯಲ್ಲಿ ಉದ್ಯೋಗಾಕಾಂಕ್ಷಿಗಳ ಜಿಲ್ಲಾ ಸಮಾವೇಶ

ಆಯ್ಕೆ ಪ್ರಕ್ರಿಯೆ ಹೇಗೆ?

ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 30,350ರೂ.ನಿಂದ 97,100 ರೂ.ವರೆಗೆ ವೇತನ ವಿಶ್ವವಿದ್ಯಾಲಯ ನೀಡಲಿದೆ.

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000 ರೂ., ಎಸ್‌ಸಿ, ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ.ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು. ನಂತರ ಆ ಅರ್ಜಿಯನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ (http://davangereuniversity.ac.in/) ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಕ್ಟೋಬರ್ 18ರೊಗಳಾಗಿ ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007 ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯ ವೆಬ್‌ಸೈಟ್‌ ಅಥವಾ ದೂರವಾಣಿ ಸಂಖ್ಯೆ 08192 208029ಗೆ ಸಂಪರ್ಕಿಸಬಹುದು ಎಂದು ಅಧಿಸೂಚನೆ ತಿಳಿಸಿದೆ.

Davanagere University recruitment: Applications invited for various non-teaching posts

English summary

Davanagere University called Applications invited for various non-teaching posts on Sep 19th.

Story first published: Friday, September 23, 2022, 16:46 [IST]Source link